ಕರ್ನಾಟಕ ಮಳೆ ವರದಿ: ಈ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜಾ ದಿನ

Krishnaveni K

ಸೋಮವಾರ, 15 ಜುಲೈ 2024 (20:35 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಇಂದೂ ಕೂಡಾ ಹಲವೆಡೆ ಭಾರೀ ಮಳೆಯಾಗಿದ್ದು ನಾಳೆಯೂ ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ನಾಳೆ ಕೆಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬೆಳಿಗ್ಗೆಯಿಂದಲೇ ವರುಣನ ಆರ್ಭಟ ಜೋರಾಗಿದೆ. ನಾಳೆಯೂ ಮಳೆಯ ವಾತಾವರಣ ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಆರು ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಉತ್ತರ ಕನ್ನಡದಲ್ಲಿನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಪದವಿ, , ಪ್ರೌಢ ಶಿಕ್ಷಣ, ಪಿಯು ಕಾಲೇಜುಗಳು, ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆಯಾಗಿದೆ. ಆದರೆ ಇಂಜಿನಿಯರಿಂಗ್, ಡಿಪ್ಲೋಮಾ, ಸ್ನಾತಕೋತ್ತರ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಉಡುಪಿಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಇಂದೂ ಭಾರೀ ಮಳೆಯ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ನಾಳೆಯೂ ರೆಡ್ ಅಲರ್ಟ್ ಜಾರಿಯಲ್ಲಿರಲಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಜುಲೈ 19 ರವರೆಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ