ಬೆಂಗಳೂರಿನಲ್ಲಿ ಇಂದೂ ಮಳೆ ಬರುತ್ತಾ, ಇಲ್ಲಿದೆ ಹವಾಮಾನ ವರದಿ

Krishnaveni K

ಗುರುವಾರ, 17 ಅಕ್ಟೋಬರ್ 2024 (10:51 IST)
ಬೆಂಗಳೂರು: ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿತ್ತು. ಆದರೆ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ಕರ್ನಾಟಕ ಹವಾಮಾನದ ಲೇಟೆಸ್ಟ್ ಮಾಹಿತಿ ಇಲ್ಲಿದೆ.

ವಾಯುಭಾರ ಕುಸಿತದ ಅಬ್ಬರ ಕೊಂಚ ಕಡಿಮೆಯಾಗಿದೆ. ಹೀಗಾಗಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ತಣ್ಣಗಾಗಿದೆ. ಆದರೆ ಹಾಗಂತ ಮಳೆ ಭೀತಿ ಸಂಪೂರ್ಣವಾಗಿ ನಿಂತಿದ ಅಂತಲ್ಲ. ದೀಪಾವಳಿವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ನಿನ್ನೆ ಮಧ್ಯಾಹ್ನದಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕೊಂಚ ತಣ್ಣಗಾಗಿದ್ದು, ಇಂದು ಬೆಳಿಗ್ಗೆಯೂ ಮಳೆಯಿರಲಿಲ್ಲ. ಆದರೆ ದಟ್ಟ ಮೋಡ ಕವಿದ ವಾತಾವರಣವಿದೆ. ಇಂದು ಸಂಜೆ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ಅದರಂತೆ ರಾಜ್ಯ ರಾಜಧಾನಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಸಂಜೆ ಭಾರೀ ಮಳೆಯಾಗಲಿದೆ. ಇದರ ಹೊರತಾಗಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ