ರಾಹುಲ್ ಹುಟ್ಟುಹಬ್ಬ ನೆಪದಲ್ಲಿ ದೆಹಲಿಗೆ ದೌಡಾಯಿಸಿದ ರಾಜ್ಯ ಕಾಂಗ್ರೆಸ್ ನಾಯಕರು
ಸಿಎಂ ಕುಮಾರಸ್ವಾಮಿ ಜತೆಗಿನ ರಾಹುಲ್ ಭೇಟಿ ನಂತರ ಎಚ್ಚೆತ್ತುಕೊಂಡ ರಾಜ್ಯ ನಾಯಕರು ದೆಹಲಿಗೆ ದೌಡಾಯಿಸಿದ್ದು, ರಾಹುಲ್ ಗಾಂಧಿ ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ.
ಉಳಿದ ಸಚಿವ ಸ್ಥಾನಗಳ ಆಯ್ಕೆ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ರಾಹುಲ್ ಜತೆ ರಾಜ್ಯ ನಾಯಕರು ಚರ್ಚಿಸಲಿದ್ದಾರೆ. ಡಿಸಿಎಂ ಪರಮೇಶ್ವರ್, ಕೆಜೆ ಜಾರ್ಜ್, ಎಚ್ ಕೆ ಪಾಟೀಲ್ ಸೇರಿದಂತೆ ಹಲವು ನಾಯಕರು ರಾಹುಲ್ ಭೇಟಿಗೆ ತೆರಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.