ಪೊಲೀಸ್ ಮೂಲಗಳ ಪ್ರಕಾರ, ಉತ್ತರಪ್ರದೇಶ ಮೂಲದ ವ್ಯಕ್ತಿಯೊಬ್ಬ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಹಣದ ನೋಟುಗಳನ್ನು ತೋರಿಸಿ, ನನ್ನೊಂದಿಗೆ ಮಲಗಲು ಬರುತ್ತೀಯಾ ಎಂದು ಕೇಳಿದ್ದಾನೆ. ಯುವಕನ ಪ್ರಶ್ನೆಯಿಂದ ಆಘಾತಗೊಂಡ ಮಹಿಳೆ ಬಸ್ ನಿಲ್ದಾಣದಲ್ಲಿ ನಿಂತಿದ್ದವರಿಗೆ ಯುವಕನ ವರ್ತನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಸ್ಥಳೀಯರು ಯುವಕನನ್ನು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.