ಯಡಿಯೂರಪ್ಪಗೆ ಕ್ಲೀನ್ ಚಿಟ್: ರಾಜ್ಯದ ಜನತೆಗೆ ಸತ್ಯ ಗೊತ್ತಿದೆ ಎಂದ ಪರಮೇಶ್ವರ್

ಬುಧವಾರ, 26 ಅಕ್ಟೋಬರ್ 2016 (14:41 IST)
ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ದೊರೆತ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈ ತೀರ್ಪನ್ನು ರಾಜಕೀಯವಾಗಿ ಪರಿಗಣಿಸುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪಿನ ಸಂಪೂರ್ಣ ಪ್ರತಿ ಸಿಕ್ಕ ಬಳಿಕ ಸೂಕ್ತ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಭ್ರಷ್ಟಾಚಾರ ಹಾಗೂ ದುರಾಡಳಿತ ನಡೆಸಿರುವುದು ಜನತೆಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು.  
 
ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಎಸ್‌ವೈ ಅವರಿಗೆ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದರು. 
 
ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರಾದ ಬಿ. ವೈ ರಾಘವೇಂದ್ರ, ಬಿ.ವೈ ವಿಜಯೇಂದ್ರ, ಅಳಿಯ ಆರ್. ಎನ್ ಸೋಹನ್ ಕುಮಾರ್, ಜಿಂದಾಲ್ ಕಂಪನಿ ಅಧಿಕಾರಿಗಳು ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳು ದೋಷಮುಕ್ತರೆಂದು ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ