Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

Sampriya

ಬುಧವಾರ, 16 ಜುಲೈ 2025 (18:08 IST)
Photo Credit X
ಬೆಂಗಳೂರು: ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಹವಾಮಾನ ಇಲಾಖೆ ಎಚ್ಚರಿಕೆಯಂತೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. 

ಇದೀಗ ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ.

ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ' ಎಂದು ಹೇಳಿದೆ.

ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರಮುಖವಾಗಿ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ