Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Krishnaveni K

ಮಂಗಳವಾರ, 22 ಏಪ್ರಿಲ್ 2025 (08:31 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಹವಾಮಾನ ಇಲಾಖೆ ಮಳೆ ಬಗ್ಗೆ ಎಚ್ಚರಿಕೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಿಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳೆದ ವಾರ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಿತ್ತು. ಆದರೆ ಈ ವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿರಂತರ ಮಳೆಯಾಗುವ ಸೂಚನೆಯಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಮಳೆಯಾಗುವ ಸೂಚನೆಯಿದೆ.

ಉಳಿದಂತೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ರಾಯಚೂರು, ಕಲಬುರಗಿ, ಬೀದರ್ ನಲ್ಲೂ ಮಳೆಯಾಗುವ ಸೂಚನೆಯಿದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ