ಬೆಂಗಳೂರು: ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಇಂದೂ ಅತಿಯಾದ ಮಳೆಯಾಗಲಿದೆ. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಅತಿಯಾಗಿ ಮಳೆಯಾಗಲಿದೆ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.
ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ನಿರಂತರ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಂತೂ ಎಡೆಬಿಡದೇ ಮಳೆಯಾಗುತ್ತಿದೆ. ಇಂದೂ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆಯಿದೆ.
ಜುಲೈ 24 ರವರೆಗೂ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವವಿದೆ.
ಬೆಂಗಳೂರು, ಕೊಡಗು, ಚಾಮರಾಜನಗರ, ರಾಮನಗರ, ಹಾಸನ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ವಾರವಿಡೀ ರಾಜ್ಯದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.