Karnataka Rains: ಈ ದಿನದವರೆಗೂ ಇರಲಿದೆ ಮಳೆಯ ಅಬ್ಬರ

Krishnaveni K

ಶುಕ್ರವಾರ, 25 ಜುಲೈ 2025 (08:37 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ಇನ್ನೆಷ್ಟು ದಿನ ರಾಜ್ಯದಲ್ಲಿ ಮಳೆಯ ಅಬ್ಬರವಿರಲಿದೆ ಇಲ್ಲಿದೆ ಹವಾಮಾನ ವರದಿ.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿರಂತರ ಮಳೆಯಾಗುತ್ತಿದೆ. ಈ ವಾರವಿಡೀ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಉಳಿದಂತೆ ರಾಜ್ಯದ ಬಹುತೇಕ ಕಡೆ ಈ ವಾರವಿಡೀ ಮಳೆಯಾಗುತ್ತಿದೆ. ಇದೀಗ ಹವಾಮಾನ ವರದಿ ಪ್ರಕಾರ ಇನ್ನೂ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು  ವರದಿಗಳು ಹೇಳುತ್ತಿವೆ. ಜುಲೈ 29 ರ ನಂತರ ಮಳೆಯ ಅಬ್ಬರ ಕಡಿಮೆಯಾಗುವ ಸೂಚನೆಯಿದೆ.

ಉಳಿದಂತೆ ಕಲಬುರಗಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಮೈಸೂರು, ತುಮಕೂರು, ಹಾವೇರಿ, ಬಾಗಲಕೋಟೆ, ಚಾಮರಾಜನಗರ, ಯಾದಗಿರಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ  ವರದಿ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ