Karnataka Rains: ರಾಜ್ಯದಲ್ಲಿ ಇಂದೂ ಭಾರೀ ಮಳೆಯ ಸಂಭವ

Krishnaveni K

ಶನಿವಾರ, 16 ಆಗಸ್ಟ್ 2025 (08:34 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಹುತೇಕ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ವಾರಂತ್ಯದಲ್ಲಿ ರಾಜ್ಯದಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೂ ಭಾರೀ ಮಳೆಯಾಗುತ್ತಿದೆ. ಸಂಜೆ ವೇಳೆ ಸುರಿಯುವ ಮಳೆಯಿಂದಾಗಿ ಸಾರ್ವಜನಿಕರು ಮನೆಗೆ ತೆರಳಲು ಪರದಾಡುವಂತಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ನಾಳೆಯವರೆಗೂ ಈ ವಾತಾವರಣ ಮುಂದುವರಿಯಲಿದೆ.

ಇನ್ನು, ಕರಾವಳಿ ಭಾಗಗಳಲ್ಲಿ ಈ ವಾರ ಆರಂಭದಲ್ಲಿ ಮಳೆ ಕೊಂಚ ಕಡಿಮೆಯಾಗಿತ್ತು. ಆದರೆ ಹವಾಮಾನ ವರದಿಗಳ ಪ್ರಕಾರ ಆಗಸ್ಟ್ 17 ರಿಂದ ಮತ್ತೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಉಳಿದಂತೆ ಇಂದು ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ರಾಯಚೂರು, ಮೈಸೂರು, ಕೋಲಾರ, ತುಮಕೂರು, ಹಾವೇರಿ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ಗದಗ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ದಾವಣಗೆರೆ, ಶಿವಮೊಗ್ಗ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಂಭವವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ