ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ಜಿಲ್ಲೆಯವರಿಗಂತೂ ಇಂದು ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.
ಕಳೆದ ವಾರದಿಂದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಇದಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಕೂಡಾ ಹೊರತಲ್ಲ. ಬೆಂಗಳೂರಿನಲ್ಲೂ ದಿನವಿಡೀ ಮೋಡ ಕವಿದ ವಾತಾವರಣ, ಅಪರಾಹ್ನದ ನಂತರ ಮಳೆಯಾಗುತ್ತಿದೆ. ಇಂದೂ ಮಳೆಯ ಸಾಧ್ಯತೆಯಿದೆ.
ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಇಂದೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಯೆಲ್ಲೊ ಅಲರ್ಟ್ ಇರಲಿದೆ.
ಉಳಿದಂತೆ ಉತ್ತರ ಕನ್ನಡ, ಬೀದರ್, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.