ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆ ಬರುತ್ತಿದ್ದು ವೀಕೆಂಡ್ ನಲ್ಲಿ ಮಳೆ ಬರುವ ಸಾಧ್ಯತೆಯಿದೆಯಾ ಎಂಬ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.
ಕರಾವಳಿ, ಮಲೆನಾಡಿನಲ್ಲಿ ವಿಪರೀತ ಎನ್ನುವಷ್ಟು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಮತ್ತು ನಾಳೆಯೂ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಜಿಲ್ಲೆಗಳಿಗೆ ನಾಳೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದ್ದು ನಾಳೆಯವರೆಗೆ ಯೆಲ್ಲೊ ಅಲರ್ಟ್ ಇದೆ. ಜುಲೈ 28 ರವರೆಗೂ ಮಳೆಯ ಅಬ್ಬರವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.