ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೇಸಿಗೆ ಮಳೆಯಾಗುತ್ತಿದೆ. ಈ ವಾರ ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಎಂಬ ವಾರದ ಹವಾಮಾನ ವರದಿ ಇಲ್ಲಿದೆ ನೋಡಿ.
ಒಂದೆಡೆ ಮಳೆಯಾದರೆ ಕೆಲವು ಕಡೆ ವಿಪರೀತ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಉತ್ತರದ ಜಿಲ್ಲೆಗಳಲ್ಲಂತೂ ತಾಪಮಾನ 40 ಡಿಗ್ರಿ ಆಸುಪಾಸು ತಲುಪಿದೆ. ವಿಪರೀತ ಬಿಸಿಲಿನಿಂದ ಜನ ತತ್ತರಿಸಿ ಹೋಗಿದ್ದಾರೆ.
ಈ ನಡುವೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕಳೆದ ವಾರ ತಾಪಮಾನದ ನಡುವೆಯೂ ಮಳೆಯಾಗಿತ್ತು. ಈ ವಾರವೂ ಮಳೆಯ ವಾತಾವರಣ ಮುಂದುವರಿಯಲಿದೆ. ಈ ವಾರವೂ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ.
ಉಳಿದಂತೆ ಉಡುಪಿ, ಚಿಕ್ಕಮಗಳೂರು, ಹಾವೇರಿ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಮಂಡ್ಯ, ಕೋಲಾರ, ಬೆಂಗಳೂರು, ತುಮಕೂರು ಮುಂತಾದ ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಉಳಿದ ದಿನಗಳಲ್ಲಿ ಬಿಸಿಲು ಮತ್ತು ಮೋಡಕವಿದ ವಾತಾವರಣವಿರಲಿದೆ.