Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

Krishnaveni K

ಸೋಮವಾರ, 11 ಆಗಸ್ಟ್ 2025 (08:30 IST)
ಬೆಂಗಳೂರು: ಕಳೆದ ವಾರವಿಡೀ ರಾಜ್ಯದಾದ್ಯಂತ ಉತ್ತಮ ಮಳೆಯಾಗಿತ್ತು. ಈ ವಾರವೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆಯೇ? ಈ ವಾರದ ಹವಾಮಾನ ವರದಿ ಇಲ್ಲಿದೆ ನೋಡಿ.

ಕಳೆದ ವಾರ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮಳೆ ಅಬ್ಬರಿಸಿತ್ತು. ಹಾಗೆ ನೋಡಿದರೆ ಕರಾವಳಿ ನಗರಗಳಲ್ಲಿ ಕೊಂಚ ಮಳೆಯ ಅಬ್ಬರ ಕಡಿಮೆಯಿತ್ತು. ಆದರೆ ವಾರಂತ್ಯಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿತ್ತು.

ಹವಾಮಾನ ವರದಿ ಪ್ರಕಾರ ಇನ್ನೂ ಮೂರು-ನಾಲ್ಕು ದಿನ ಮಳೆ ಹೆಚ್ಚಾಗಲಿದೆ. ಬಹುತೇಕ ಕಡೆ ಇಂದಿನಿಂದ ವಾರಂತ್ಯದವರೆಗೂ ಮಳೆಯ ಸಾಧ್ಯತೆಯಿದೆ. ಬೆಂಗಳೂರು, ಕಲಬುರಗಿ ಜಿಲ್ಲೆಗಳಲ್ಲಿ ಈ ವಾರ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸೂಚನೆಯಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಈ ವಾರವೂ ಸಾಧಾರಣ ಮಳೆಯ ಸಾಧ್ಯತೆಯಿದೆಯಷ್ಟೇ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಕೋಲಾರ, ತುಮಕೂರು, ಬೆಳಗಾವಿ, ಶಿವಮೊಗ್ಗ, ಹಾವೇರಿ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಬೀದರ್, ದಾವಣಗೆರೆ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ವಾರಂತ್ಯಕ್ಕೆ ಮತ್ತೆ ಮಳೆಯ ಅಬ್ಬರ ಕಡಿಮೆಯಾಗುವ ಸೂಚನೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ