ಇಂದು ರಾಜರತ್ನನಿಗೆ ಕರ್ನಾಟಕ ರತ್ನ
ನಟ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಕನ್ನಡದ ರಾಜರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ದೂರಿ ಕಾರ್ಯಕ್ರಮ ನಡೆಯಲಿದ್ದು, ಹಂಪಿ ಮಾದರಿಯ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಿನಿ ದಿಗ್ಗಜರು ಸಾಕ್ಷಿಯಾಗಲಿದ್ದಾರೆ. ರಜನಿಕಾಂತ್, ಜ್ಯೂ. NTR, ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಡಾ.ರಾಜ್‌ಕುಮಾರ್ ಕುಟುಂಬಸ್ಥರಿಗೆ ಆಹ್ವಾನ ನೀಡಲಾಗಿದೆ. ಸಾರ್ವಜನಿಕರು ರಸ್ತೆಯಲ್ಲಿ ನಿಂತು ನೋಡಲು ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರ ವೀಕ್ಷಣೆಗಾಗಿ 10ಕ್ಕೂ ಹೆಚ್ಚು LED ಅಳವಡಿಕೆ ಮಾಡಿದ್ದಾರೆ. ಗಾಯಕ ವಿಜಯ್ ಪ್ರಕಾಶ್ ತಂಡದಿಂದ ಗಾಯನ ಕಾರ್ಯಕ್ರಮ ಕೂಡ ನಡೆಯಲಿದೆ.