ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ (92) ಅವರು ಮಂಗಳವಾರ ಬೆಳಗ್ಗೆ 3:30ಕ್ಕೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾದರು.
92ವಯಸ್ಸಿನ ಎಸ್ಎಂ ಕೃಷ್ಣ ಅವರು ಕಳೆದ 6ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಈಚೆಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡ ಅವರಿಗೆ ಕೆಲ ತಿಂಗಳುಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳವಾರ ನಸುಕಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಬೆಳಗ್ಗೆ 3:30ಕ್ಕೆ ಎಸ್ಎಂ ಕೃಷ್ಣ ಮರಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗುತ್ತದೆ.
2017 ರಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದ ಕೃಷ್ಣ ಅವರು ಅದೇ ವರ್ಷದಲ್ಲಿ ಬಿಜೆಪಿಗೆ ಸೇರಿದರು. 2023ರ ಜನವರಿ 7 ರಂದು ಕೃಷ್ಣ ಅವರು ತಮ್ಮ 60 ವರ್ಷಗಳ ಸುರ್ಧೀಘ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.