ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ
ಇನ್ನು, ಪರೀಕ್ಷೆಗೆ ಹಾಜರಾಗುವ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಅನಾರೋಗ್ಯಕ್ಕೊಳಗಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದಿದ್ದಾರೆ.
ಇನ್ನು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಜೂನ್ 18 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.