Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

Sampriya

ಬುಧವಾರ, 30 ಏಪ್ರಿಲ್ 2025 (18:37 IST)
Photo Courtesy X
ಬೆಂಗಳೂರು: ಕರ್ನಾಟಕ SSLC ಫಲಿತಾಂಶ 2025 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ಮೇ 9 ರ ಸುಮಾರಿಗೆ ಪ್ರಕಟಿಸುವ ನಿರೀಕ್ಷೆಯಿದೆ.

ವಿದ್ಯಾರ್ಥಿಯ ಶೈಕ್ಷಣಿಕ ವೃತ್ತಿಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ತುಂಬಾನೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ಫಲಿತಾಂಶ ವಿದ್ಯಾರ್ಥಿಯ ಮುಂದಿನ ಶೈಕ್ಷಣಿಕ ಬದುಕಿನ ಹಾದಿಯನ್ನು ತೀರ್ಮಾನಿಸುತ್ತದೆ.

SSLC ಮತ್ತು PUC ಪರೀಕ್ಷೆಗಳಿಗೆ ಕರ್ನಾಟಕ ಬೋರ್ಡ್ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳನ್ನು ಪರಿಶೀಲಿಸಬಹುದು. ಈ ವೆಬ್‌ಸೈಟ್‌ಗಳು ಈ ಕೆಳಗಿನಂತಿವೆ:

kseab.karnataka.gov.in
pue.karnataka.gov.in
karresults.nic.in

ಇದೀಗ ಪರೀಕ್ಷಾ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದ್ದು, ರಾಜ್ಯದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಉತ್ಸುಕರಾಗಿದ್ದಾರೆ ಮತ್ತು ಆತಂಕವನ್ನು ಅನುಭವಿಸುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ