ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ವಿರೋಧ

geetha

ಬುಧವಾರ, 28 ಫೆಬ್ರವರಿ 2024 (21:12 IST)
ಬೆಂಗಳೂರು-ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ, 'ಬೇರೆ ಇಲಾಖೆಗಳ ಕೆಲಸ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಮೀಕ್ಷೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪದೇ ಪದೇ ಆದೇಶ ಹೊರಡಿಸುವ ಧೋರಣೆ ಖಂಡನೀಯ. ಈಗಾಗಲೇ ಗ್ಯಾರಂಟಿ ಯೋಜನೆಗಳ ಕುರಿತು ಸಮೀಕ್ಷೆ ನಡೆಸಲು ತರಬೇತಿ ಪಡೆಯಬೇಕೆಂದು ತಾಲ್ಲೂಕು-ಜಿಲ್ಲಾ ಮಟ್ಟದ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ' ಎಂದು ಆರೋಪಿಸಿದರು.
 
ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ನೀಡುವ ಸರ್ಕಾರದ ಆರನೇ ಗ್ಯಾರಂಟಿ ಕೂಡಲೇ ಜಾರಿಗೊಳಿಸಬೇಕು. ಇಂದಿನ ಬೆಲೆ ಏರಿಕೆ ಸಂದರ್ಭದಲ್ಲಿ ಕನಿಷ್ಠ ಬದುಕಲು ಅಗತ್ಯವಾದಷ್ಟು ಸಂಭಾವನೆ ನೀಡಬೇಕು' ಎಂದು ಆಗ್ರಹಿಸಿದರು.
 
 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರನ್ನು ಸ್ವಯಂ ಸೇವಕರನ್ನಾಗಿ ನೇಮಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್  ವಿರೋಧ ವ್ಯಕ್ತಪಡಿಸಿದೆ.
 
ಇನ್ನೂ ಧರಣಿಯಲ್ಲಿ ಫೆಡರೇಷನ್‌ ಉಪಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್, ಜಿಲ್ಲಾ ಅಧ್ಯಕ್ಷೆ ವೈ.ಡಿ. ಗಿರಿಜಾ, ಕಾರ್ಯದರ್ಶಿ ಅನುಸೂಯ, ಖಜಾಂಚಿ ದಾಕ್ಷಾಯಿಣಿ ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ