ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪತ್ರಿಕಾಗೋಷ್ಠಿ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಕುರಿತು ರಾಜ್ಯಾಧ್ಯಕ್ಷರಾದ ಸಿ.ರಮೇಶ್ ರವರು ಮಾಧ್ಯಮಗೋಷ್ಠಿ ನಡೆಸಿದ್ರು. ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಮಾತನಾಡಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಮತ್ತು ಗುತ್ತಿಗೆದಾರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಶತಮಾನೋತ್ಸವದ ಲಾಂಛನ ಬಿಡುಗಡೆ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 10-30ಕ್ಕೆ ಅರಮನ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ರವರು ದೀಪಾ ಬೆಳಗಿಸಿ ಉದ್ಘಾಟನೆ ಮಾಡಲಿದ್ದಾರೆ. ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯುವನಟ, ಜೆ.ಡಿ.ಎಸ್.ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರ್ ಸ್ವಾಮಿರವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದ್ರು, ವಿದ್ಯುತ್ ಗುತ್ತಿದಾರರ ಸಮಾವೇಶದಲ್ಲಿ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ಚರ್ಚೆ ಹಾಗೂ ಮುಖ್ಯಮಂತ್ರಿಗಳಿಗೆ ಮತ್ತು ಇಂಧನ ಸಚಿವರಿಗೆ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಮನವಿ ನೀಡುವ ಕಾರ್ಯಕ್ರಮ ಎಂದು ಹೇಳಿದರು.