ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬುಧವಾರ, 31 ಮೇ 2023 (18:50 IST)
2023-24ನೇ ಸಾಲಿನ ವಿದ್ಯಾರ್ಥಿ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ನಿರ್ಧರಿಸಿರುವ ಹಿನ್ನೆಲೆ ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಲಾಗಿದೆ.ಈ ಸಂಬಂಧ ವಿದ್ಯಾರ್ಥಿಗಳಿಗೆ ದಿನಾಂಕ 15.06.2023 ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಂಡಿದ್ದು,2022-23ನೇ ಸಾಲಿನ ವಿದ್ಯಾರ್ಥಿ ಬಸ್‌ಪಾಸ್‌ ಹಾಗೂ ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಶುಲ್ಕ ಪಾವತಿ ರಸೀದಿ ತೋರಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರಿಂದ ಸುತ್ತೋಲೆ ಹೊರಡಿಸಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ