ತುರ್ತು ಆಯಂಬುಲೆನ್ಸ್ ಸೇವೆಗೆ ಹೊಸ ಯೋಜನೆ ರೂಪಿಸಲಾಗುತ್ತಿದ್ದು, ಇದು ದೇಶಕ್ಕೆ ಮಾದರಿಯಾಗಲಿದೆ ಎಂದು ಸಚಿವ ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಕೃಷ್ಣಬೈರೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ 71 ಆರೋಗ್ಯ ಕವಚ 108 ಆಯಂಬುಲೆನ್ಸ್ಗಳು ಕಾರ್ಯನಿರ್ವಹಿಸುತ್ತಿವೆ.
ಮುಂದಿನ ಸೇವಾದಾರರು ಆಯ್ಕೆಯಾಗುವವರೆಗೂ ಆಯಂಬುಲೆನ್ಸ್ನ ಮೇಲ್ವಿಚಾರಣೆಯನ್ನು ಜಿಪಿಎಸ್ ಟ್ರಾಕಿಂಗ್ ದತ್ತಾಂಶಗಳ ಪರಿಶೀಲನೆ ಹಾಗೂ ಕ್ಷೇತ್ರ ಭೇಟಿ ಮೂಲಕ ಮಾಡಲಾಗುತ್ತಿದೆ ಎಂದರು.