ಸೋಮವಾರದಿಂದ ಹಾಫ್ ಅನ್ ಲಾಕ್

ಶುಕ್ರವಾರ, 11 ಜೂನ್ 2021 (08:53 IST)
ಬೆಂಗಳೂರು: ಸೋಮವಾರದಿಂದ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಕೆಲವೊಂದು ಕ್ಷೇತ್ರಕ್ಕೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿದೆ.


ಕೊರೋನಾ ಅಧಿಕ ಸಂಖ್ಯೆಯಲ್ಲಿರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಕೆಲವೊಂದು ಬದಲಾವಣೆ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಜೂನ್ 14 ರಿಂದ 21 ರವರೆಗೆ ಹೊಸ ನಿಯಮಗಳು ಜಾರಿಯಲ್ಲಿರಲಿವೆ. ಅದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.  ಎಲ್ಲಾ ಕಾರ್ಖಾನೆಗಳಲ್ಲಿ ಶೇ.50 ಮತ್ತು ಗಾರ್ಮೆಂಟ್ಸ್ ಗಳಲ್ಲಿ ಶೇ.30 ಸಿಬ್ಬಂದಿಗೆ ಕಾರ್ಯನಿರ್ವಹಿಸಲು ಅವಕಾಶ. ಕಟ್ಟಡ ಕಾಮಗಾರಿ, ಅದಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅವಕಾಶವಿದ್ದು, ಕೃಷಿ ಚಟುವಟಿಕೆಗಳಿಗೂ ಸಂಪೂರ್ಣ ವಿನಾಯ್ತಿ ನೀಡಲಾಗಿದೆ. ಆದರೆ ಜೂನ್ 14 ರ ನಂತರವೂ ಬಸ್ ಸಂಚಾರವಿರಲ್ಲ.  ಆದರೆ ಆಟೋಗಳಲ್ಲಿ ಇಬ್ಬರು ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಪಾರ್ಕ್ ಗಳನ್ನು ತೆರೆಯಲು ಬೆಳಿಗ್ಗೆ 5 ರಿಂದ 10 ರವರೆಗೆ ಅನುಮತಿ.

ನೈಟ್ ಕರ್ಫ್ಯೂ ಜೊತೆಗೆ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಹಾಲು, ದಿನಸಿ ಖರೀದಿಗೆ ನಿರ್ಬಂಧ ಸಡಿಲಿಸಲಾಗಿದೆ. ಮಧ್ಯಾಹ್ನ 2 ರವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ