Karnataka Weather: ರಾಜ್ಯದ ಈ ಪ್ರದೇಶದಲ್ಲಿ ಇನ್ನೂ ಒಂದು ವಾರ ವ್ಯಾಪಕ ಮಳೆ

Sampriya

ಶನಿವಾರ, 10 ಮೇ 2025 (10:49 IST)
ಬೆಂಗಳೂರು: ರಾಜ್ಯದಲ್ಲಿ ಕೆಲ ದಿನದಿಂದ ಬಿಸಿಲ ತಾಪ ಏರುತ್ತಿದ್ದು, ಸಂಜೆ ವೇಳೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಾಕ ಮಳೆಯಾಗುತ್ತಿದೆ.

ಇದೀಗ ಬಿಸಿಲ ತಾಪಕ್ಕೆ ಸುಸ್ತಾಗಿದ್ದ ಮಂದಿಗೆ ಇಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಮೇ 10ರಿಂದ ಮೇ 12ರವರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ಮಳೆ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಶುಕ್ರವಾರ ಭರ್ಜರಿ ಮಳೆಯಾಗಿದೆ.

ಕರಾವಳಿ ಕರ್ನಾಟಕದಾದ್ಯಂತ ಒಣ ಹವೆ ವರದಿಯಾಗಿದೆ. ಚಿತ್ರದುರ್ಗ, ಚಾಮರಾಜನಗರದ ಹರದನಹಳ್ಳಿ ಭಾಗಗಳಲ್ಲಿ ಹೆಚ್ಚು ಮಳೆ ಸುರಿದಿದೆ.

ಇನ್ನೂ ಮೇ 10ರಿಂದ ಶನಿವಾರ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ ಮತ್ತು ತುಮಕೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ