ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೊಂಥಾ ಸೈಕ್ಲೋನ್ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದೂ ಸೈಕ್ಲೋನ್ ಮಳೆ ಮುಂದುವರಿಯಲಿದೆಯಾ ಇಲ್ಲಿದೆ ಹವಾಮಾನ ವರದಿ.
ರಾಜ್ಯದಲ್ಲಿ ಹಿಂಗಾರು ಮಳೆ ತಗ್ಗುತ್ತಿದ್ದಂತೆಯೇ ಈಗ ಸೈಕ್ಲೋನ್ ಪರಿಣಾಮ ಮಳೆ ಶುರುವಾಗಿದೆ. ಇದರ ಪರಿಣಾಮ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಗುರುವಾರದವರೆಗೂ ಮಳೆಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಲಬುರಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೀದರ್ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಅದರಲ್ಲೂ ಕಲಬುರಗಿ ಜಿಲ್ಲೆಗೆ ಇಂದು ಭಾರೀ ಮಳೆಯಾಗುವ ಸೂಚನೆಯಿದೆ.