ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯವರು ಇಂದಿನ ಹವಾಮಾನವನ್ನು ವೀಕ್ಷಿಸಬೇಕು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ನಿನ್ನೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ತಕ್ಕಮಟ್ಟಿಗೆ ಮಳೆಯಾಗಿತ್ತು. ಈ ಜಿಲ್ಲೆಗೆ ಇಂದೂ ಮಳೆಯ ಸೂಚನೆಯಿದೆ. ಇಂದೂ ಕೂಡಾ ಸಣ್ಣ ಮಟ್ಟಿಗೆ ಮಳೆಯಾಗಲಿದೆ ಎಂದು ವರದಿಯಾಗಿದೆ.
ಆದರೆ ಪಕ್ಕದ ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿಲ್ಲ. ಕೊಡಗಿನಲ್ಲೂ ನಿನ್ನೆಯವರೆಗೆ ಮಳೆಯಾಗಿತ್ತು. ಆದರೆ ಇಂದು ವರುಣ ತಕ್ಕಮಟ್ಟಿಗೆ ಬಿಡುವು ನೀಡಲಿದ್ದಾನೆ. ಮಂಡ್ಯದಲ್ಲಿ ಇಂದು ಸಣ್ಣ ಹನಿ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲಿನ ತಾಪ ಮುಂದುವರಿಯಲಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಸೆಖೆಯ ವಾತಾವರಣವಿದೆ. ಇಂದೂ ಅದು ಮುಂದುವರಿಯಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.