ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ವಿಜಯಪುರ, ಹಾವೇರಿ, ಕಲಬುರಗಿ, ಧಾರವಾಡ, ಮಂಡ್ಯ, ಮೈಸೂರಿನಲ್ಲೂ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಮೈಸೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದು ಇನ್ನೂ ಮೂರು ದಿನ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಬಹುತೇಕ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಲೇ ಇದೆ. ಜೂನ್ 29 ರವರೆಗೆ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.