ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ: ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ ಇಲ್ಲಿದೆ ಡೀಟೈಲ್ಸ್

Krishnaveni K

ಶುಕ್ರವಾರ, 28 ಜೂನ್ 2024 (09:17 IST)
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇಂದೂ ಮುಂದುವರಿದಿದೆ.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ನಾಲ್ಕು ದಿನ ಮಳೆ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ಎರಡು ದಿನದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ನೇತ್ರಾವತಿ, ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಾಗುತ್ತಿದ್ದು ಭದ್ರಾನದಿ ಮೈದುಂಬಿ ಹರಿಯುತ್ತಿದೆ. ಕೇರಳದ ಗಡಿನಾಡು ಕಾಸರಗೋಡಿನಲ್ಲೂ ಭಾರೀ ಮಳೆಯಾಗುತ್ತಿದ್ದು ಪ್ರಸಿದ್ಧ ಮಧೂರು ಮಹಾಗಣಪತಿ ದೇವಾಲಯ ಜಲಾವೃತವಾಗಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ