ಬೆಂಗಳೂರಿನಲ್ಲೂ ಮಳೆಯ ಅಬ್ಬರ: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆ ಇಲ್ಲಿದೆ ಡೀಟೈಲ್ಸ್

Krishnaveni K

ಗುರುವಾರ, 4 ಜುಲೈ 2024 (10:18 IST)
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಕರ್ನಾಟಕದ ಹಲವೆಡೆ ನಿನ್ನೆಯೂ ಭಾರೀ ಮಳೆಯಾಗಿದ್ದು, ಇಂದೂ ಮಳೆಯ ವಾತಾವರಣ ಮುಂದುವರಿದಿದೆ.

ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇಂದೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ನಿನ್ನೆ ಅಪರಾಹ್ನ ಬೆಂಗಳೂರಿನಲ್ಲೂ ಮಳೆ ಸುರಿದಿದೆ. ಇಂದೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಎಲ್ಲಾ ಲಕ್ಷಣಗಳಿವೆ. ಉಳಿದಂತೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲ್ಲಿದೆ ಡೀಟೈಲ್ಸ್.

ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾಸನ, ಚಿಕ್ಕಮಗಳೂ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿಯಷ್ಟಿದ್ದು, ಕನಿಷ್ಠ ಉಷ್ಣಾಂಶ 20.6 ಡಿಗ್ರಿಯಷ್ಟಿದೆ. ಇಂದೂ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಅಪರಾಹ್ನದ ಬಳಿಕ ಮಳೆಯಾಗುವ ಸಂಭವವಿದೆ. ಕರ್ನಾಟಕದ ಉತ್ತರ ಭಾಗಗಳಲ್ಲೂ ಇಂದು ಮಳೆಯಾಗುವ ಸಂಭವವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ