ಬೆಂಗಳೂರು: ರಾಜ್ಯಾದ್ಯಂತ ಕಳೆದ ವಾರ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿತ್ತು. ಆದರೆ ಈ ವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸೂಚನೆಯಿದೆ ಗಮನಿಸಿ.
ಈ ಬಾರಿ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುತ್ತಿದೆ. ಕಳೆದ ವಾರ ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆ ಬಿರುಸಾಗಲಿದೆ. ವಿಶೇಷವಾಗಿ ದಕ್ಷಿಣ ಕನ್ನಡದಲ್ಲಿ ವಾರಂತ್ಯಕ್ಕೆ ಮಳೆಯ ಅಬ್ಬರ ಹೆಚ್ಚಾಗಲಿದೆ.
ವಾರದ ಆರಂಭದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವಾರ ಎರಡರಿಂದ ಮೂರು ದಿನ ಭಾರೀ ಮಳೆಯಾಗುವ ಸೂಚನೆಯಿದೆ. ವಿಶೇಷವಾಗಿ ನಾಳೆ ಮತ್ತು ಗುರುವಾರಗಳಂದು ಭಾರೀ ಮಳೆಯ ನಿರೀಕ್ಷೆಯಿದೆ. ಉಳಿದ ದಿನಗಳಲ್ಲೂ ಸಾಧಾರಣ ಮಳೆಯಾಗಲಿದೆ.
ಉಳಿದಂತೆ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಹುಬ್ಬಳ್ಳಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ವಾರದ ಬಹುತೇಕ ದಿನಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಇದರ ಹೊರತಾಗಿ ಹಾವೇರಿ, ಬೆಳಗಾವಿ, ರಾಯಚೂರು, ಚಿತ್ರದುರ್ಗ, ಗದಗ, ಬೀದರ್, ಕೊಪ್ಪಳ, ದಾವಣಗೆರೆ ಜಿಲ್ಲಿ ವಾರವಿಡೀ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ವಾರವಿಡೀ ಬಹುತೇಕ ಮೋಡ ಕವಿದ ವಾತಾವರಣ ಸಣ್ಣ ಮಳೆಯಾಗುವ ಸಾಧ್ಯತೆಯಿದೆ.