Karnataka Weather: ಈ ಎರಡು ಜಿಲ್ಲೆಗಳಿಗೆ ಇಂದು ಭಾರೀ ಮಳೆ

Krishnaveni K

ಬುಧವಾರ, 2 ಜುಲೈ 2025 (08:25 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದೆ. ಇಂದಂತೂ ಈ ಎರಡು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಇಂದು ಅಧಿಕ ಮಳೆ, ಎಲ್ಲಿ ಮೋಡ ಕವಿದ ವಾತಾವರಣವಿರಲಿದೆ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.

ಈ ಬಾರಿ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಲೇ ಇದೆ.  ಇಂದೂ ಈ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ದಕ್ಷಿಣ ಕನ್ನಡ ಮಾತ್ರವಲ್ಲದೆ, ಈ ಬಾರಿ ಅತೀ ಹೆಚ್ಚು ಮಳೆ ಕಂಡಿರುವ ಮತ್ತೊಂದು ಜಿಲ್ಲೆ ಎಂದರೆ ಉಡುಪಿ. ಈ ಕರಾವಳಿ ಜಿಲ್ಲೆಯಲ್ಲೂ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಈ ಎರಡು ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಚಿಕ್ಕಮಗಳೂರಿನಲ್ಲೂ ಇಂದು ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಉಳಿದಂತೆ ಉತ್ತರ ಕನ್ನಡ, ಕೊಡಗು, ಹಾವೇರಿ, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ತುಮಕೂರು, ಚಿತ್ರದುರ್ಗ,ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬಳ್ಳಾರಿ, ರಾಯಚೂರು, ಗದಗ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸೂಚನೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ