Karnataka Weather: ಇಂದು ಈ ಮೂರು ಜಿಲ್ಲೆಗೆ ಭಾರೀ ಮಳೆ ನಿರೀಕ್ಷೆ

Krishnaveni K

ಗುರುವಾರ, 3 ಜುಲೈ 2025 (08:42 IST)
ಬೆಂಗಳೂರು: ಕರಾವಳಿ ಗಡಿ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ಅದರಲ್ಲೂ ರಾಜ್ಯದ ಈ ಮೂರು ಜಿಲ್ಲೆಯಲ್ಲಿ ಮಾತ್ರ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ನಿನ್ನೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆಯಾಗಿತ್ತು. ಇದನ್ನು ಹೊರತುಪಡಿಸಿದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಉಳಿದ ಜಿಲ್ಲೆಗಳಲ್ಲೂ ನಿನ್ನೆ ಸಾಧಾರಣ ಮಳೆಯಿತ್ತು.

ಇಂದೂ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದೆ. ಆದರೆ ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಇಂದೂ ಭಾರೀ ಮಳೆಯಾಗಲಿದೆ. ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಇಂದು ಮಳೆಯ ನಿರೀಕ್ಷೆಯಿದೆ.

ಉಳಿದಂತೆ ಹಾಸನ, ಕೊಡಗು, ಹಾವೇರಿ, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಳಗಾವಿ, ದಾವಣಗೆರೆ, ಗದಗ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬಿದರ್, ತುಮಕೂರು, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ