ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಕೆಲವೊಂದು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿತ್ತು. ಆದರೆ ಈ ವಾರ ಮಳೆ ತೀವ್ರತೆ ಹೆಚ್ಚಾಗಲಿದ್ದು ಯಾವೆಲ್ಲಾ ಭಾಗಗಳಲ್ಲಿ ಮಳೆಯಾಗಲಿದೆ ಎಂಬ ಈ ವಾರದ ಹವಾಮಾನ ವರದಿ ಇಲ್ಲಿದೆ.
ಕಳೆದ ವಾರ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ವಾರ ಭಾರೀ ಮಳೆಯಾಗಿತ್ತು. ಈ ವಾರವೂ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇದಲ್ಲದೆ, ಈ ವಾರ ಇನ್ನಷ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ. ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಈ ವಾರವಿಡೀ ಮಳೆಯ ಮುನ್ಸೂಚನೆಯಿದೆ. ಬುಧವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಉಳಿದಂತೆ ಉತ್ತರ ಕನ್ನಡ, ಮೈಸೂರು, ಮಂಡ್ಯ, ಹಾಸನ, ಕೋಲಾರ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ಕೊಪ್ಪಳ, ಬೀದರ್, ವಿಜಯಪುರ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲೂ ಈ ವಾರವಿಡೀ ಮಳೆಯ ಸಾಧ್ಯತೆಯಿದೆ.