Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

Krishnaveni K

ಸೋಮವಾರ, 1 ಸೆಪ್ಟಂಬರ್ 2025 (08:43 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಮಳೆಯ ಅಬ್ಬರವಿತ್ತು. ಈ ವಾರ ಮಳೆಯ ಅಬ್ಬರ ಕಡಿಮೆಯಾಗಲಿದೆಯಾ? ಇಲ್ಲಿದೆ ಈ ವಾರದ ಹವಾಮಾನ ವರದಿ.

ಕಳೆದ ವಾರ ಕರ್ನಾಟಕದಲ್ಲಿ ಭಾರೀ ಮಳೆಯಾಗಿತ್ತು. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮಲೆನಾಡು ಜಿಲ್ಲೆಗಳು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮಳೆ ಪ್ರಮಾಣ ಹೆಚ್ಚಾಗಿತ್ತು. ಈ ವಾರವೂ ಆರಂಭದಲ್ಲಿ ಮಳೆ ಹೆಚ್ಚಾಗಲಿದೆ. ಸೆಪ್ಟೆಂಬರ್ 4 ರವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಬೆಂಗಳೂರಿನಲ್ಲೂ ಶುಕ್ರವಾರದವರೆಗೂ ಮಳೆ ಮುಂದುವರಿಯಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ತುಮಕೂರು, ಚಿತ್ರದುರ್ಗ, ಹಾವೇರಿ, ಗದಗ, ರಾಯಚೂರು, ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ವಾರವಿಡೀ ನಿರಂತರ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಪ್ಪಳ, ಚಾಮರಾಜನಗರ, ಕೋಲಾರ, ತುಮಕೂರು ಮೊದಲಾದ ಜಿಲ್ಲೆಗಳಲ್ಲಿ ಕೆಲವು ದಿನ ಮಳೆ, ಕೆಲವು ದಿನ ಮೋಡ ಕವಿದ ವಾತಾವರಣವಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ