Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ

Krishnaveni K

ಗುರುವಾರ, 15 ಮೇ 2025 (08:16 IST)
ಬೆಂಗಳೂರು: ರಾಜ್ಯದಲ್ಲಿ ಮೊನ್ನೆಯಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಇಂದೂ ಕೂಡಾ ಬಹುತೇಕ ಮಳೆಯ ಸೂಚನೆಯಿದೆ. ಇಂದು ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಈ ಬಾರಿ ಮುಂಗಾರು ಬೇಗನೇ ಪ್ರವೇಶ ಮಾಡಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಅದರಂತೆ ಈ ಬಾರಿ ಬೇಸಿಗೆ ಮಳೆಯೂ ಉತ್ತಮವಾಗಿತ್ತು. ಈ ವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಅಲ್ಲಲ್ಲಿ ಮಳೆಯಾಗಿತ್ತು.

ಇಂದೂ ಕೂಡಾ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಉಳಿದಂತೆ ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಕಲಬುರ್ಗಿ, ಬಾಗಲಕೋಟೆ, ಬಿಜಾಪುರ, ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 29-30 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ