Karnataka Weather: ಇಂದಿನಿಂದ ಹೆಚ್ಚಾಗಲಿದೆ ಮಳೆ ಅಬ್ಬರ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Krishnaveni K

ಮಂಗಳವಾರ, 5 ಆಗಸ್ಟ್ 2025 (08:37 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಮುಂಗಾರಿನ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿತ್ತು. ಆದರೆ ಇಂದಿನಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಈ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆ ಬಿಟ್ಟರೆ ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಅಷ್ಟಾಗಿರಲಿಲ್ಲ. ಆದರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಲೇ ಇತ್ತು. ಆದರೆ ಇಂದಿನಿಂದ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮಳೆ ತೀವ್ರವಾಗಲಿದೆ.

ವಿಶೇಷವಾಗಿ ಇಂದು ಕರ್ನಾಟಕದ ದಕ್ಷಿಣ ಭಾಗ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಹೀಗಾಗಿ ಇಂದು ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

ಉಳಿದಂತೆ ಬಾಗಲಕೋಟೆ, ಮೈಸೂರು, ಮಂಡ್ಯ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ರಾಮಗರ, ಚಾಮರಾಜನಗರ, ಕೊಪ್ಪಳ, ಕೊಡಗು, ಹಾಸನ, ವಿಜಯನಗರ ಜಿಲ್ಲೆಗಳಲ್ಲೂ ಇಂದು ಮಳೆ ನಿರೀಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ