ಬೆಂಗಳೂರು: ರಾಜ್ಯದಲ್ಲಿ ಈ ವಾರ ಮಳೆಯ ಸೂಚನೆಯಿಲ್ಲ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವಾರ ಸೆಖೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು.
ಬೆಂಗಳೂರಿನಲ್ಲಿ ಕಳೆದ ವಾರ ಕೊಂಚ ಮಳೆಯಾಗಿತ್ತು. ಇದಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿತ್ತು. ಆದರೆ ಈ ವಾರ ಮಳೆಯ ಸೂಚನೆಯಿಲ್ಲ. ಬದಲಾಗಿ ತಾಪಮಾನದಲ್ಲಿ ಗಣನೀಯ ಏರಿಕೆಯಾಗಲಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಸೆಖೆ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ಈ ವಾರ ಗರಿಷ್ಠ ತಾಪಮಾನ 34-35 ಡಿಗ್ರಿಯವರೆಗೆ ತಲುಪಲಿದೆ. ಇಂದು ಬೆಂಗಳೂರಿನ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 21 ಡಿಗ್ರಿಯಷ್ಟು ಕಂಡುಬರಲಿದೆ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಂತೂ ಗರಿಷ್ಠ ತಾಪಮಾನ 37 ಡಿಗ್ರಿಗೆ ಏರಿಕೆಯಾಗಲಿದೆ.
ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 36 ಡಿಗ್ರಿಯವರೆಗೆ ಏರಿಕೆಯಾಗುವ ಸಂಭವವಿದೆ. ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣ ಕಂಡುಬರಲಿದೆ. ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 21 ಡಿಗ್ರಿಯಷ್ಟು ಕಂಡುಬರುವುದು.