Karnataka Weather: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆಯಿದೆಯೇ ಇಲ್ಲಿದೆ ವಿವರ

Krishnaveni K

ಶುಕ್ರವಾರ, 7 ಮಾರ್ಚ್ 2025 (09:10 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳಿಗೆ ಹವಾಮಾನದಲ್ಲಿ ಈ ವ್ಯತ್ಯಾಸವಾಗುವುದು ಖಚಿತ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಈಗ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಂತೂ ಉಷ್ಣ ಅಲೆ ಕಂಡುಬರುತ್ತಿದೆ. ಮೇ ತಿಂಗಳಿನ ಬಿಸಿಲಿನ ಹವಾಮಾನವನ್ನು ಜನರು ಈಗಾಗಲೇ ಎದುರಿಸುತ್ತಿದ್ದಾರೆ.

ಇದೀಗ ಮುಂದಿನ ನಾಲ್ಕು ದಿನಗಳಿಗೆ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಘುವಾಗಿ ಮೋಡ ಕವಿದ ವಾತಾವರಣದ ಜೊತೆ ಬಿಸಿಲು ಕಂಡುಬಂದಿತ್ತು. ಆದರೆ ಇಂದಿನಿಂದ ನಾಲ್ಕು ದಿನಗಳವರೆಗೆ ಬಿಸಿಲು ರಣಕೇಕೆ ಹಾಕಲಿದೆ.

ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 35 ಡಿಗ್ರಿಯವರೆಗೆ ಇರಲಿದೆ ಎಂದು ತಿಳಿದುಬಂದಿದೆ. ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಬಿಸಿಗಾಳಿ ಪ್ರಮಾಣ ಹೆಚ್ಚಾಗಲಿದ್ದು, ಮುಂದಿನ ನಾಲ್ಕು ದಿನಗಳವರೆಗೆ ತಾಪಮಾನ 36 ರಿಂದ 39 ಡಿಗ್ರಿಯವರೆಗೆ ತಲುಪುವ ಸಾಧ್ಯತೆಗಳಿವೆ ಎನ್ನಲಾಗಿದೆ. ಮುಂದಿನ ವಾರದಿಂದ ಗರಿಷ್ಠ ತಾಪಮಾನ ಇನ್ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಕೆ ನೀಡಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ