ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದ್ದು ಮಳೆಗಾಲದ ವಾತಾವರಣವಿದೆ. ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಈ ಹವಾಮಾನ ವರದಿಯನ್ನು ತಪ್ಪದೇ ಗಮನಿಸಿ.
ಕಳೆದ ಶನಿವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ಸಾಕಷ್ಟು ಹಾನಿಗಳೂ ಆದ ವರದಿಯಾಗಿದೆ.
ಇಂದೂ ರಾಜ್ಯದ ವಿವಿಧೆಡೆ ಮಳೆಯ ಸೂಚನೆಯಿದೆ. ಆದರೆ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಲಿದೆ. ಬಹುತೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ರಾಜ್ಯದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟು ಇರುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಇಂದು ದಿನವಿಡೀ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ತುಂತುರು ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಉಳಿದಂತೆ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ತುಮಕೂರು, ಕೋಲಾರ, ಬೀದರ್, ತುಮಕೂರು, ಬಳ್ಳಾರಿ, ಉತ್ತರ ಕನ್ನಡ, ಹಾವೇರಿ, ರಾಯಚೂರು, ಶಿವಮೊಗ್ಗ, ಬಾಗಲಕೋಟೆ ಜಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.