Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ವಿಪರೀತ ತಾಪಮಾನದ ಎಚ್ಚರಿಕೆ, ಗಮನಿಸಿ
ರಾಜ್ಯದಲ್ಲಿ ಈಗ ಹಿಂದೆಂದೂ ಕಾಣದಂತೆ ಕಡುಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ ಏಪ್ರಿಲ್ ತಿಂಗಳಲ್ಲಿ ಕಂಡುಬರುತ್ತಿದ್ದು ಬಿಸಿಲಿನ ತಾಪ ಫೆಬ್ರವರಿಯಲ್ಲೇ ಆರಂಭವಾಗಿತ್ತು. ಹೀಗಾಗಿ ಈ ಬಾರಿ ತಾಪಮಾನ ದಾಖಲೆ ಮಾಡಲಿದೆ ಎಂದು ಈಗಾಗಲೇ ಹವಾಮಾನ ವರದಿಗಳು ಹೇಳಿವೆ.
ಈ ವಾರ ಗರಿಷ್ಠ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡಕ್ಕೆ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ 38 ಡಿಗ್ರಿಯಷ್ಟಿದ್ದು, ನಾಳೆ ಇನ್ನಷ್ಟು ಹೆಚ್ಚಾಗುವ ಸೂಚನೆಯಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಹೊರಗೆ ಓಡಾಡುವುದನ್ನು ಆದಷ್ಟು ಕಡಿಮೆ ಮಾಡಲು ಸೂಚಿಸಲಾಗಿದೆ.