Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಮಳೆ ಅಲರ್ಟ್

Krishnaveni K

ಬುಧವಾರ, 26 ಮಾರ್ಚ್ 2025 (08:36 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಮುಂಗಾರು ಪೂರ್ವ ಮಳೆಯ ಪರ್ವ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ.

ಸತತ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆಯ ಸಿಂಚನವಾಗುತ್ತಿದೆ. ಇದು ರೈತರಿಗೆ ಸಂಕಷ್ಟ ತಂದಿತ್ತರೂ ಸಾಮಾನ್ಯ ಜನರಿಗೆ ಕೊಂಚ ಮಟ್ಟಿಗಾದರೂ ಸೆಖೆಯಿಂದ ಮುಕ್ತಿ ಸಿಕ್ಕಿತಲ್ಲ ಎಂಬ ಖುಷಿಯಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಿತ್ತು.

ಇಂದೂ ಕೂಡಾ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಅದರ ಜೊತೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಗೂ ಮಳೆಯ ಸೂಚನೆಯಿದೆ.

ಉಳಿದಂತೆ ಮಂಡ್ಯ, ಬೆಂಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ ಇತ್ಯಾದಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮತ್ತು ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 32 ಡಿಗ್ರಿಯಷ್ಟಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ