Karnataka Rains: ರಾಜ್ಯದಲ್ಲಿ ಇಂದು ಮಳೆಯಾಗಲಿದೆಯೇ ಇಲ್ಲಿದೆ ವಿವರ

Krishnaveni K

ಬುಧವಾರ, 23 ಏಪ್ರಿಲ್ 2025 (08:15 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಲಿನ ನಡುವೆಯೂ ಮಳೆಯ ಸಿಂಚನವಾಗುತ್ತಿದೆ. ಇಂದು ರಾಜ್ಯದ ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ನೋಡಿ ವರದಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ಮಾತ್ರ ತುಂತುರು ಮಳೆ ಬಿಟ್ಟರೆ ಎರಡು ದಿನಗಳಿಂದ ಹೆಚ್ಚು ಮಳೆಯಾಗಿಲ್ಲ. ಇಂದೂ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಇಂದೂ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯಿದೆ. ಕೊಡಗಿನಲ್ಲೂ ಇದೇ ವಾತಾವರಣವಿರಲಿದೆ.

ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಉಳಿದಂತೆ ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ