Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Krishnaveni K

ಶನಿವಾರ, 7 ಜೂನ್ 2025 (08:30 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮುಂಗಾರು ಮಳೆ ಅಬ್ಬರ ಕಡಿಮೆಯಾಗಿದೆ. ಹಾಗಿದ್ದರೂ ಕೆಲವು ಕಡೆ ಮಾತ್ರ ಸಣ್ಣ ಮಟ್ಟಿಗೆ ಮಳೆಯಾಗುತ್ತಿದೆ. ಇಂದು ಹವಾಮಾನದಲ್ಲಾಗಲಿರುವ ಈ ಬದಲಾವಣೆಗಳನ್ನು ತಪ್ಪದೇ ಗಮನಿಸಿ.

ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಮಳೆ ಕಡಿಮೆಯಾಗಿತ್ತು. ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿಯಾಗಿತ್ತು. ಉಳಿದ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುತ್ತಿತ್ತು. ಆದರೆ ಈ ವಾರ ಮಳೆಯ ಅಬ್ಬರ ಕಡಿಮೆಯಾಗಿದೆ.

ವಾರಂತ್ಯದಲ್ಲೂ ಇದೇ ಸ್ಥಿತಿ ಇರಲಿದೆ. ಇಂದೂ ರಾಜ್ಯದಾದ್ಯಂತ ಮಳೆ ಸಾಧ್ಯತೆ ಕಡಿಮೆ. ರಾಜ್ಯದ ಸರಾಸರಿ ಹವಾಮಾನ ಗಮನಿಸಿದರೆ ಇಂದು ಭಾಗಶಃ ಮೋಡ ಮತ್ತು ಬಿಸಿಲಿನ ವಾತಾವರಣವಿರಲಿದೆ. ಕೆಲವೊಂದು ಜಿಲ್ಲೆಗಳಲ್ಲಿ ಮಾತ್ರ ಮಳೆಯ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾವೇರಿ, ರಾಯಚೂರು, ಗದಗ, ಬಾಗಲಕೋಟೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ಮತ್ತುಬಿಸಿಲಿನ ವಾತಾವರಣವಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ