Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

Krishnaveni K

ಬುಧವಾರ, 16 ಜುಲೈ 2025 (08:25 IST)
ಬೆಂಗಳೂರು: ರಾಜ್ಯದಲ್ಲಿ ಮೊನ್ನೆಯಿಂದ ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ಯಾವೆಲ್ಲಾ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಇಲ್ಲಿದೆ ನೋಡಿ ವಿವರ.

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಈ ಜಿಲ್ಲೆಗಳ ಹೊರತಾಗಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ತುಂತುರು ಮಳೆಯಾಗಿದ್ದು ಬಿಟ್ಟರೆ ಇತ್ತೀಚೆಗಿನ ದಿನಗಳಲ್ಲಿ ಭಾರೀ ಮಳೆಯಾಗಿರಲಿಲ್ಲ.

ಉಳಿದಂತೆ ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ತುಮಕೂರು, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಬಳ್ಳಾರಿ, ಕೊಪ್ಪಳ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ