ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರದಿಂದಲೂ ಭಾರೀ ಮಳೆಯಾಗುತ್ತಿದೆ. ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ, ಯಾವ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗಲಿದೆ ಇಲ್ಲಿದೆ ವಿವರ.
ಕರ್ನಾಟಕದಲ್ಲಿ ಕರಾವಳಿ ಮತ್ತು ಉತ್ತರ ಭಾಗಗಳಲ್ಲೂ ಇಂದೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ವರದಿ ಪ್ರಕಾರ ಇನ್ನೂ ಎರಡು ದಿನ ಭಾರೀ ಮಳೆಯ ಸೂಚನೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇದಲ್ಲದೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ಬೀದರ್, ದಾವಣಗೆರೆ, ಕೋಲಾರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯ ಸೂಚನೆಯಿದೆ.
ಆಗಸ್ಟ್ 17 ರವರೆಗೂ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮಳೆಯ ಜೊತೆಗೆ ಭಾರೀ ಗಾಳಿಯೂ ಇರುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿ ಭಾಗಗಳಲ್ಲಿ ಕಡಲ ತೀರಗಳಿಗೆ ಹೋಗುವುದು ಸುರಕ್ಷಿತವಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.