Karnataka Weather: ಈ ವಾರ ಹವಾಮಾನದಲ್ಲಿ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

Krishnaveni K

ಸೋಮವಾರ, 27 ಅಕ್ಟೋಬರ್ 2025 (08:30 IST)
ಬೆಂಗಳೂರು: ಕಳೆದ ವಾರವಿಡೀ ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಕಂಡುಬಂದಿತ್ತು. ಆದರೆ ಈ ವಾರದಲ್ಲಿ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ.

ಹವಾಮಾನ ವರದಿಗಳ ಪ್ರಕಾರ ಈ ವಾರ ಬುಧವಾರದವರೆಗೂ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಅಕ್ಟೋಬರ್ 29 ರ ನಂತರ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ವಾರದ ಮಧ್ಯ ಭಾಗದಿಂದ ಮಳೆ ಕಡಿಮೆಯಾಗಲಿದ್ದು, ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ತುಮಕೂರು, ರಾಮನಗರ, ಚಾಮರಾಜಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ರಾಯಚೂರು, ಹಾವೇರಿ, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಕಲಬುರಗಿ, ಯಾದಗಿರಿ, ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದವರೆಗೂ ಮಳೆಯಾಗಲಿದೆ. ವಾರಂತ್ಯಕ್ಕೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಗುರುವಾರದವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಯಾದಗಿರಿ, ವಿಜಯಪುರ, ಧಾರವಾಡ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಕೊಪ್ಪಳ ಸೇರಿದಂತೆ ಕೆಲವೇ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ