ಬೆಂಗಳೂರು: ಬಿರು ಬೇಸಿಗೆಯ ನಡುವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ರಾಯನ ಆಗಮನವಾಗಿದೆ. ಇಂದೂ ಈ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಗುಡುಗು ಸಹಿತ ಭರ್ಜರಿ ಮಳೆಯಾಗಿತ್ತು. ಈ ವಾರದ ಮಧ್ಯ ಭಾಗದವರೆಗೂ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಅದರಂತೆ ಇಂದು ಕೊಡಗು, ಹಾಸನ, ಮಂಡ್ಯ, ರಾಮನಗರ, ಚಿತ್ರದುರ್ಗ, ಕಲಬುರಗಿ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಸಣ್ಣ ಮಟ್ಟಿಗೆ ಮಳೆಯಾಗುವ ಸೂಚನೆಯಿದೆ. ರಾಯಚೂರಿನಲ್ಲಿ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.
ಉಳಿದ ಜಿಲ್ಲೆಗಳಲ್ಲಿ ಇಂದು ಬಹುತೇಕ ಬಿಸಿಲಿನ ವಾತಾವರಣ ಕಂಡುಬರುವುದು. ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 32 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ.