ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ನೀಡಿದ್ದ ಮಳೆ ಇಂದಿನಿಂದ ಮತ್ತೆ ಅಬ್ಬರಿಸಲಿದೆ. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ.
ರಾಜ್ಯದಲ್ಲಿ ಕಳೆದ ವಾರಂತ್ಯಕ್ಕೆ ಮಳೆಯ ಅಬ್ಬರ ಕಡಿಮೆಯಾಗಿತ್ತು. ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಕಡೆ ಮಳೆಗೆ ಕೊಂಚ ಬ್ರೇಕ್ ಬಿದ್ದಿತ್ತು. ಹಾಗಿದ್ದರೂ ಮೋಡ ಕವಿದ ವಾತಾವರಣ, ತುಂತುರು ಮಳೆ ಮುಂದುವರಿದಿತ್ತು.
ಹವಾಮಾನ ವರದಿ ಪ್ರಕಾರ ಇಂದಿನಿಂದ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆಯಿದೆ. ಇದು ಈ ವಾರಂತ್ಯದವರೆಗೂ ಮುಂದುವರಿಯಲಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.