Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಮಳೆ ಗ್ಯಾರಂಟಿ

Krishnaveni K

ಬುಧವಾರ, 19 ಮಾರ್ಚ್ 2025 (09:51 IST)
ಬೆಂಗಳೂರು: ರಾಜ್ಯದಲ್ಲಿ ಈಗ ವಿಪರೀತ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆಯ ಸಿಂಚನವಾಗುತ್ತಿದೆ. ಇಂದು ಕರ್ನಾಟಕದ ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಎಂದು ಹವಾಮಾನ ವರದಿ ಇಲ್ಲಿದೆ ನೋಡಿ.

ಕರ್ನಾಟಕದಲ್ಲಿ ಈಗ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಹಾಗಿದ್ದರೂ ಕೆಲವೆಡೆ ಸಣ್ಣ ಮಟ್ಟಿಗೆ ಮಳೆಯಾಗುತ್ತಿದೆ. ಮೊನ್ನೆ ಮೈಸೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿತ್ತು. ಕಳೆದ ವಾರ ದಕ್ಷಿಣ ಕನ್ನಡದಲ್ಲಿ ಮಳೆಯಾಗಿತ್ತು.

ಇಂದೂ ಕೆಲವೆಡೆ ಮಳೆಯಾಗುವ ಸೂಚನೆಯಿದೆ. ಹವಾಮಾನ ವರದಿಗಳ ಪ್ರಕಾರ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಗಲು ವಿಪರೀತ ಬಿಸಿಲು ಅಪರಾಹ್ನದ ನಂತರ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ಸದ್ಯಕ್ಕೆ ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿಯಷ್ಟು ತಲುಪಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ