ಬೆಂಗಳೂರು: ರಾಜ್ಯದಲ್ಲಿ ಈಗ ಬೇಸಿಗೆ ಮಳೆಯ ಪರ್ವ. ರಾಜ್ಯದ ಈ ಕೆಲವು ಭಾಗಗಳಿಗೆ ಇಂದು ತಪ್ಪದೇ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಆ ಭಾಗಗಳು ಯಾವುವು ಇಲ್ಲಿದೆ ನೋಡಿ ವರದಿ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಸಂಜೆಯೂ ಸ್ವಲ್ಪ ಮಳೆಯಾಗಿತ್ತು. ಈ ವಾರ ಬಿಸಿಲಿನ ವಾತಾವರಣದ ಜೊತೆಗೆ ಕೆಲವು ದಿನ ಮಳೆಯ ಸೂಚನೆಯಿತ್ತು. ಅದರಂತೆ ನಿನ್ನೆ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಹವಾಮಾನ ವರದಿಗಳ ಪ್ರಕಾರ ಇಂದೂ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಇಂದೂ ಈ ಜಿಲ್ಲೆಯಲ್ಲಿ ಮಳೆಯ ಸೂಚನೆಯಿದೆ.
ದಕ್ಷಿಣ ಕನ್ನಡ ಮಾತ್ರವಲ್ಲದೆ, ಕೊಡಗು ಜಿಲ್ಲೆಯಲ್ಲೂ ಇಂದು ಮಳೆಯಾಗುವ ಸೂಚನೆಯಿದೆ. ಆದರೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.